ಕರ್ನಾಟಕ

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗ್ತಾರೆ ಎಂದ ಜನಾರ್ದನ ರೆಡ್ಡಿ

Pinterest LinkedIn Tumblr

janardhan-reddy

ಕೊಪ್ಪಳ: ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಹನುಮ ಜಯಂತಿ ಹಿನ್ನೆಲೆಯಲ್ಲಿ ಗಂಗಾವತಿಯ ಪಂಪಾ ಸರೋವರಕ್ಕೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪನವವರ ರಾಜ್ಯದ ಜನತೆಯ ಆಶೀರ್ವಾದದಿಂದಾಗಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಶ್ರೀರಾಮುಲು ಅವರನ್ನ ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ಮಾಡಿರುವುದು ಸಂತಸ ತಂದಿದೆ ಎಂದು ಹೇಳಿದರು.

ಬಹಳ ದಿನಗಳಿಂದ ಈ ಕ್ಷೇತ್ರಕ್ಕೆ ಭೇಟಿ ನೀಡಬೇಕು ಎನ್ನುವ ಆಸೆ ಇತ್ತು. ಇಂದು ಈ ಆಸೆ ಈಡೇರಿದೆ ಎಂದು ಜನಾರ್ದನ ರೆಡ್ಡಿ ತಿಳಿಸಿದರು. ಇಂದಿನಿಂದ 3 ದಿನ ಹನುಮ ಮಾಲೆಯನ್ನು ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಧರಿಸಲಿದ್ದಾರೆ.

Comments are closed.