ಕರ್ನಾಟಕ

ಬಿಪಿಒ ಉದ್ಯೋಗಿ ಪ್ರತಿಭಾ ಅತ್ಯಾಚಾರ ಮತ್ತು ಕೊಲೆ ಕೇಸ್; ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

Pinterest LinkedIn Tumblr

pra

ಬೆಂಗಳೂರು: ಬಿಪಿಒ ಉದ್ಯೋಗಿ ಪ್ರತಿಭಾ ಶ್ರೀಕಾಂತಮೂರ್ತಿಯನ್ನು ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಕ್ಯಾಬ್ ಚಾಲಕ ಶಿವಕುಮಾರ್ ಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಮಂಗಳವಾರ ಎತ್ತಿಹಿಡಿಯುವ ಮೂಲಕ ಖಾಯಂಗೊಳಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿಗಳಾದ ಹೆಚ್. ಬಿಲ್ಲಪ್ಪ ಮತ್ತು ಕೆ.ಎನ್.ಫಣೀಂದ್ರ ಅವರಿದ್ದ ವಿಭಾಗೀಯ ಪೀಠ ಸೆಷನ್ಸ್ ನ್ಯಾಯಾಲಯ 2010ರಲ್ಲಿ ನೀಡಿದ್ದ ತೀರ್ಪನ್ನು ಮಂಗಳವಾರ ಎತ್ತಿಹಿಡಿದಿದೆ.ಚಾಲಕ ಶಿವಕುಮಾರ್ ಜೀವಾವಧಿ ಶಿಕ್ಷೆ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹೆಚ್ ಪಿ ಗ್ಲೋಬಲ್ ಸಾಫ್ಟ್ ಬಿಪಿಒ ಕಂಪೆನಿಯಲ್ಲಿ ಪ್ರತಿಭಾ ಶಿವಕುಮಾರ್ ಕೆಲಸ ಮಾಡುತ್ತಿದ್ದರು. 2005ರ ಡಿಸೆಂಬರ್ 13ರಂದು ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿಕೊಂಡು ಪ್ರತಿಭಾ ಮನೆಗೆ ವಾಪಸಾಗಲು ಚಾಲಕ ಶಿವಕುಮಾರ್ ಇದ್ದ ಕ್ಯಾಬ್ ನ್ನೇರಿದ್ದರು. ಆತ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದ. ಈ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಉಂಟು ಮಾಡಿತ್ತು.

Comments are closed.