ಕರ್ನಾಟಕ

ಹಾವೇರಿ: ಮರಕ್ಕೆ ಆಟೋ ಡಿಕ್ಕಿ, 6 ಮಹಿಳೆಯರು ಸ್ಥಳದಲ್ಲೇ ಸಾವು

Pinterest LinkedIn Tumblr

accidentc2ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಸಿಡೇನೂರು ಗ್ರಾಮದ ಬಳಿ ಮರಕ್ಕೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಆರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ಗಂಗವ್ವ ದೊಡ್ಡ ನೀಲಪ್ಪಾರ್(52), ಗಿರಿಜವ್ವ ಗುಳೇದರ(42), ಫಾತಿಮವ್ವ ದಾಸರ(26), ಜೋಗವ್ವ ದಾಸರ(30), ರೇಣುಕಾ ದಾಸರ(30), ಕವಿತಾ ಬಾರ್ಕಿ(26) ಎಂದು ಗುರುತಿಸಲಾಗಿದ್ದು, ಮೃತ ಮಹಿಳೆಯರು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ಗ್ರಾಮದ ಕಾರ್ಮಿಕರು ಎನ್ನಲಾಗಿದೆ.
ಆಟೋದಲ್ಲಿದ್ದ ಇತರೆ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಬ್ಯಾಡಗಿ ಪಟ್ಟಣದ ಮೆಣಸಿನಕಾಯಿ ಮಾರುಕಟ್ಟೆಯ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದ ಸಂಧರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.