ಕರ್ನಾಟಕ

ಉನ್ನತ ವ್ಯಾಸಂಗಕ್ಕೆ ವಿದೇಶಕ್ಕೆ ಕಳುಹಿಸಲು ನಿರಾಕರಿಸದ ಪೋಷಕರು : ಉಪನ್ಯಾಸಕಿ ಆತ್ಮಹತ್ಯೆ

Pinterest LinkedIn Tumblr

suಚಿತ್ರದುರ್ಗ, ಜೂ.2-ಪೋಷಕರು ಉನ್ನತ ವ್ಯಾಸಂಗಕ್ಕೆ ವಿದೇಶಕ್ಕೆ ಕಳುಹಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದೊಡ್ಡಪೇಟೆಯಲ್ಲಿ ನಡೆದಿದೆ. ಬಳ್ಳಾರಿಯ ಕಾಲೇಜುವೊಂದರಲ್ಲಿ ಉಪನ್ಯಾಸಕಿಯಾಗಿದ್ದ ಶ್ರೀದೇವಿ (25) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಎಂ.ಎಸ್ಸಿ ವ್ಯಾಸಂಗ ಮಾಡಿದ್ದ ಈಕೆ, ನ್ಯೂಜಿಲೆಂಡ್ ಮತ್ತಷ್ಟು ಉನ್ನತ ವ್ಯಾಸಂಗ ಮಾಡಲು ಬಯಸಿದ್ದಳು. ಇದಕ್ಕಾಗಿ ಸಿದ್ಧತೆಯನ್ನೂ ಕೂಡ ಮಾಡಿಕೊಂಡಿದ್ದರು. ಆದರೆ ಈಕೆ ಪೋಷಕರು ಇದಕ್ಕೆ ಒಪ್ಪಿರಲಿಲ್ಲ. ಹಲವಾರು ಅವರ ಮನವೊಲಿಸಲು ಈಕೆ ಪ್ರಯತ್ನಿಸಿದರೂ ಅದು ಸಾಧ್ಯವಾಗಿರಲಿಲ್ಲ.

ನಿನ್ನೆ ಕಾಲೇಜಿಗೆ ತೆರಳಿ ಸಂಜೆ ಮನೆಗೆ ಬಂದ ಆಕೆ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ತಡರಾತ್ರಿಯಾದರೂ ಊಟಕ್ಕೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಆಕೆಯನ್ನು ಕರೆಯಲು ಹೋದಾಗ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆತಂಕಗೊಂಡು ನಂತರ ನೆರೆಹೊರೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದುಕೊಂಡಿರುವುದು ಗೊತ್ತಾಯಿತು ಎಂದು ಹೇಳಲಾಗಿದೆ.

ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments are closed.