ಕರ್ನಾಟಕ

ಜೆಡಿಎಸ್ ದರ್ಬಲಗೊಳ್ಳಲು ಆಂತರಿಕ ಕಲಹವೇ ಕಾರಣ: ಸಿದ್ದರಾಮಯ್ಯ

Pinterest LinkedIn Tumblr

sidduಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜೆಡಿಎಸ್ ದರ್ಬಲಗೊಳ್ಳಲು ಆ ಪಕ್ಷದಲ್ಲಿರುವ ಆಂತರಿಕ ಕಲಹವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್‌ಗೆ ತಿರುಗೇಟು ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಜೆಡಿಎಸ್ ಪಕ್ಷ ದುರ್ಬಲಗೊಳ್ಳಲು ಕಾಂಗ್ರೆಸ್ ಪಕ್ಷ ಕಾರಣವಲ್ಲ. ಆ ಪಕ್ಷದಲ್ಲಿರುವ ಆಂತರಿಕ ಕಲಹವೇ ಕಾರಣ. ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರನ್ನು ಖರೀದಿ ಮಾಡಲು ಕಾಂಗ್ರೆಸ್ ಪಕ್ಷ ಮುಂದಾಗುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಮತ ನೀಡಲು ಶಾಸಕರಿಂದ ಕೋಟಿ ಕೋಟಿ ಹಣದ ಬೇಡಿಕೆ ಪ್ರಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ನೇರ ಕಾರಣ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗಂಭೀರವಾಗಿ ಆರೋಪಿಸಿದ್ದರು. ಈ ಕುರಿತು ತೀರುಗೇಟು ನೀಡಿರುವ ಮುಖ್ಯಮಂತ್ರಿಯವರು ರಾಜ್ಯದಲ್ಲಿ ಆಪರೇಶನ್ ಕಮಲ ಆರಂಭಿಸಿರುವುದು ಬಿ.ಎಸ್.ಯಡಿಯೂರಪ್ಪ ಎಂದು ಗುಡುಗಿದ್ದಾರೆ.

ಚುನಾವಣೆಯಲ್ಲಿ ಜೆಡಿಎಸ್ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತೇವೆ ಎಂದು ಸ್ವಯಂ ಪ್ರೇರಿತವಾಗಿ ಮುಂದೆ ಬಂದರೆ ಬೇಡ ಎನ್ನುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಷ್ಟಪಡಿಸಿದ್ದಾರೆ.

Comments are closed.