ಕರ್ನಾಟಕ

ಬಸ್ ಡಿಕ್ಕಿ ಪತ್ನಿ ಸಾವು ಪತಿಗೆ ಗಾಯ

Pinterest LinkedIn Tumblr

criಬೆಂಗಳೂರು,ಜೂ.೫-ಜೆಸಿ ರಸ್ತೆಯಲ್ಲಿ ನಿನ್ನೆ ಸಂಜೆ ಹಿಂದಿನಿಂದ ವೇಗವಾಗಿ ಬಂದ ತಮಿಳುನಾಡು ಬಸ್ ಡಿಕ್ಕಿ ಹೊಡೆದು ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಪತ್ನಿ ಮೃತಪಟ್ಟರೆ ಪತಿ ಗಾಯಗೊಂಡಿದ್ದಾರೆ.
ಯಲಹಂಕದ ಪವೈ(೩೫)ಮೃತಪಟ್ಟವರಾಗಿದ್ದಾರೆ.ಪವೈ ಆವರ ಪತಿ ನಂದಕುಮಾರ್ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೋಗಿಲು ರಸ್ತೆಯಲ್ಲಿ ದ್ವಿಚಕ್ರವಾಹನಗಳ ಸೀಟ್ ಕವರುಗಳನ್ನು ಹಾಕುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಂದಕುಮಾರ್ ಅವರು ಪತ್ನಿ ಪವೈ ಅವರನ್ನು ಕರೆದುಕೊಂಡು ಸಂಜೆ ೬.೩೦ರಲ್ಲಿ ಜೆಸಿ ರಸ್ತೆಯಲ್ಲಿ ಸೀಟ್ ಕವರ್‌ಗಳನ್ನು ತೆಗೆದುಕೊಂಡು ಹೊಂಡಾ ಆಕ್ಟಿವಾ ಸ್ಕೂಟರ್‌ನಲ್ಲಿ ಜೆಸಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ತಮಿಳುನಾಡು ಬಸ್ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಹಿಂದೆ ಕುಳಿತಿದ್ದ ಪವೈ ಅವರು ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ೯ರ ವೇಳೆ ಮೃತಪಟ್ಟಿದ್ದಾರೆ ಸಿಟಿ ಮಾರುಕಟ್ಟೆ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಗಿರೀಶ್ ಅವರು ತಿಳಿಸಿದ್ದಾರೆ.

ಹೆಲ್ಮೆಟ್ ಧರಿಸಿ ಸರಗಳವು ಇಬ್ಬರ ಸೆರೆ
ಬೆಂಗಳೂರು,ಜೂ.೫-ಗುರುತು ಸಿಗದಂತೆ ಮಾಡಲು ಹೆಲ್ಮೆಟ್ ಧರಿಸಿ ಒಂಟಿ ಮಹಿಳೆಯರ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಬಂಧಿಸುವಲ್ಲಿ ವಿವೇಕ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಖಾಜಾ ಮತ್ತು ತಬ್ರೇಜ್ ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರಿಂದ ೩೫೦ ಗ್ರಾಂ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿ ಬಂದು ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದರು.
ಇರಾನಿ ಗ್ಯಾಂಗ್ ಮಾದರಿಯಲ್ಲಿ ಸರಗಳ್ಳತನ ನಡೆಸುತ್ತಿದ್ದ ಆರೋಪಿಗಳ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ವಿವೇಕನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

Comments are closed.