
ತುಮಕೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ನಗರದ ಕೋತಿತೋಪಿನ ಹುರುಳಿ ತೋಟದಲ್ಲಿ ನಡೆದಿದೆ.
ನಗರದ ಹುರುಳಿ ತೋಟದ ದಿಲೀಪ್ (25) ಎಂಬಾತನೆ ಕೊಲೆಯಾಗಿರುವ ದುರ್ದೈವಿ. ಈತ ನಗರದ ಕೋತಿತೋಪಿನಲ್ಲಿ ಕೋಳಿ ವ್ಯಾಪಾರ ಮಾಡುತ್ತಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.
ಕೊಲೆಯಾಗಿರುವ ದಿಲೀಪ್ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದು, ಕೆಲ ದಿನಗಳ ಹಿಂದೆಯಷ್ಟೆ ಜೈಲಿನಿಂದ ಬಿಡುಗಡೆಯಾಗಿದ್ದನೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕೊಲೆ ಪ್ರಕರಣದ ಬಗ್ಗೆ ನಿಖರ ಮಾಹಿತಿಯನ್ನು ಪೊಲೀಸರ ತನಿಖೆಯಿಂದಷ್ಟೆ ತಿಳಿಯಬೇಕಿದೆ.
ಈ ಸಂಬಂಧ ನಗರಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Comments are closed.