ಮೈಸೂರು, ಜೂ.7-ರಾಜ್ಯಸಭೆ, ವಿಧಾನಪರಿಷತ್ ಚುನಾವಣೆ ನಂತರ ನಮ್ಮ ಪಕ್ಷದ ಭಿನ್ನಮತೀಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿ ಕೆ.ಟಿ.ಶ್ರೀಕಂಠೇಗೌಡ ಅವರ ಪರ ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ಮತ ಪ್ರಚಾರ ನಡೆಸಿದ ವೇಳೆ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಕ್ಷ ವಿರೋಧಿ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ ಕುಮಾರಸ್ವಾಮಿ ನಮ್ಮ ಜೆಡಿಎಸ್ ಪಕ್ಷವನ್ನು ಮುಗಿಸಲು ಕಾಂಗ್ರೆಸ್, ಬಿಜೆಪಿ ಪರಸ್ಪರ ಹೊಂದಾಣಿಕೆ ಮಾಡಿಕೊಂಡಿವೆ. ಆದರೆ ಇದಕ್ಕೆ ರಾಜ್ಯದ ಜನತೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡುವ ಪಕ್ಷೇತರ ಶಾಸಕರು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಿದರು. ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ಪಕ್ಷವನ್ನು ಉಳಿಸಿಕೊಳ್ಳಲು ರಾಜ್ಯಾದ್ಯಂತ ಏಕಾಂಗಿ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು. ಇದೇ ವೇಳೆ ಪುರಾಣದ ಕಥೆಯೊಂದನ್ನ ಹೇಳಿ ಶಿವನನ್ನು ಒಲಿಸಿಕೊಳ್ಳಲಿ. ತಪಸ್ಸು ಮಾಡಿ ವರ ಪಡೆದು ನಂತರ ಶಿವ ನೀಡಿದ ವರದಿಂದಲೇ ಶಿವನಿಗೆ ತಿರು ಮಂತ್ರ ಹಾಕಿದ ಹಾಗೆ ಕಲಿಯುಗದಲ್ಲೂ ನಡೆಯುತ್ತಿದೆ. ಶಿವನನನ್ನೇ ಬಿಡದವರು ನನ್ನಂತಹ ಹುಲಿ ಮಾನವನನ್ನು ಬಿಡುತ್ತಾರೆಯೇ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು. ಅಭ್ಯರ್ಥಿ ಶ್ರೀಕಂಠೇಗೌಡ, ನಗರ ಜೆಡಿಎಸ್ ಅಧ್ಯಕ್ಷ ರಾಜಣ್ಣ ಮತ್ತಿತರ ಮುಖಂಡರು ಈ ವೇಳೆ ಹಾಜರಿದ್ದರು.
Comments are closed.