ಕರ್ನಾಟಕ

ರಾಜ್ಯಸಭೆ, ಪರಿಷತ್ ಚುನಾವಣೆ ಅಕ್ರಮ ಕುರಿತು ದೂರು ಬಂದಿಲ್ಲ : ಸ್ಪೀಕರ್ ಕಾಗೋಡು ತಿಮ್ಮಪ್ಪ

Pinterest LinkedIn Tumblr

kkkಬೆಂಗಳೂರು, ಜೂ.8- ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಇದುವರೆಗೆ ಯಾವುದೇ ದೂರುಗಳು ಬಂದಿಲ್ಲ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣಾ ಅಕ್ರಮ ದೂರುಗಳು ಬಂದಿಲ್ಲ. ಒಂದು ವೇಳೆ ಶಾಸಕರ ಸದಸ್ಯತ್ವ ರದ್ದತಿ ಬಗ್ಗೆ ದೂರುಗಳು ಬಂದಲ್ಲಿ ಪರಿಶೀಲನೆ ಮಾಡಬಹುದಾಗಿದೆ. ಅದು ಕೂಡ ಶಾಸಕರು ಶಾಸನಸಭೆ ಒಳಗೆ ಉಲ್ಲಂಘನೆ ಮಾಡಿದ್ದರೆ ಮಾತ್ರ ಪರಿಶೀಲನೆ ಮಾಡಬಹುದು ಎಂದು ತಿಳಿಸಿದರು.

ರೆಸಾರ್ಟ್ ರಾಜಕೀಯದ ವಿಷಯದಲ್ಲಿ ಮಾಧ್ಯಮಗಳೇ ಜನಪ್ರತಿನಿಧಿಗಳಿಗೆ ಬುದ್ಧಿ ಹೇಳಬೇಕು ಎಂದು ಮಾರ್ಮಿಕವಾಗಿ ನುಡಿದರು. ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆ ಸಂಬಂಧ ಪ್ರಶ್ನಿಸಿದ ವರದಿಗಾರರ ಪ್ರಶ್ನೆಗೆ ಶೆಣೈ ಅವರಿಗೆ ಸರ್ಕಾರಿ ಕೆಲಸ ಮಾಡುವ ಆಸಕ್ತಿ ಇದೆಯೋ ಇಲ್ಲವೋ ಗೊತ್ತಿಲ್ಲ. ಜವಾನನಿಂದ ಹಿಡಿದು ಉನ್ನತ ಅಧಿಕಾರಿವರೆಗೆ ಯರೂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವಂತಿಲ್ಲ ಎಂದು ಹೇಳಿದರು. ಶೆಣೈ ಅವರು ತಮ್ಮ ಮೇಲಿನ ಅಧಿಕಾರಿಗೆ ತಮ್ಮ ಸಮಸ್ಯೆಗಳನ್ನು ತಿಳಿಸಬಹುದಿತ್ತು. ಅವರು ಸಿದ್ದರಾಮಯ್ಯ ಸರ್ಕಾರ ರಮ್ ಸರ್ಕಾರ ಎಂದೇನಾದರೂ ಹೇಳಿರುವುದು ನಿಜವಾಗಿದ್ದರೆ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕಾಗೋಡು ತಿಮ್ಮಪ್ಪ ಹೇಳಿದರು.

Comments are closed.