ಕರ್ನಾಟಕ

ದೇವೇಗೌಡರು ತಂದೆಯಂತೆ, ಕುಮಾರಸ್ವಾಮಿ ನಾಯಕರಂತೆ: ಉಲ್ಟಾ ಹೊಡೆದ ಚಲುವರಾಯಸ್ವಾಮಿ

Pinterest LinkedIn Tumblr

zzzಬೆಂಗಳೂರು,: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ನನ್ನ ತಂದೆಯಂತೆ ಕುಮಾರಸ್ವಾಮಿಯವರು ನಮ್ಮ ನಾಯಕರು ಎಂದು ಜೆಡಿಎಸ್ ಶಾಸಕ ಚೆಲುವರಾಯಸ್ವಾಮಿ ರಾಗ ಬದಲಾಯಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಗೆ ಮತದಾನ ಮಾಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಚೆಲುವರಾಯಸ್ವಾಮಿ, ನಿನ್ನೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಸಾಮಾಜಿಕ ಜಾಲತಾಣ ವಾಟ್ಸಪ್ ಮೂಲಕ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನೇ ಬೆಂಬಲಿಸಿದ್ದೇನೆ. ಕುಮಾರಸ್ವಾಮಿ ಅವರೆ ನಮ್ಮ ನಾಯಕರು ಎಂದು ಹೇಳಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಜೆಡಿಎಸ್ ಶಾಸಕ ಚೆಲುವರಾಯಸ್ವಾಮಿ, ದಕ್ಷಿಣ ಪದವೀಧರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಟಿ.ಶ್ರೀಕಂಠೇಗೌಡರನ್ನು ಬೆಂಬಲಿಸಬೇಡಿ. ಅವರಿಗೆ ಮತ ನೀಡಬೇಡಿ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ನನ್ನನ್ನು ಭಸ್ಮಾಸುರರೆನ್ನಲಿ ಏನಾದರು ಅಂದರೂ ನಾನು ಎಚ್.ಡಿ. ದೇವೇಗೌಡ ಮತ್ತು ಕುಮಾರಸ್ವಾಮಿ ಕುರಿತು ಪ್ರತಿಕ್ರಿಯೆ ನೀಡಲ್ಲ ಎಂದು ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದರು.

Comments are closed.