ಕರ್ನಾಟಕ

ಮುರಳಿ ಮನೋಹರ್ ಜೋಷಿ ಮುಂದಿನ ರಾಷ್ಟ್ರಪತಿ ……..ಸಾಧ್ಯತೆ ?

Pinterest LinkedIn Tumblr

murali_manhr_josi

ನವದೆಹಲಿ ಜೂ.15: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಷಿ ಅವರು ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಹಿರಿಯ ಬಿಜೆಪಿ ಮುಖಂಡ ಮುರಳಿ ಮನೋಹರ್ ಜೋಷಿ ಮುಂದಿನ ರಾಷ್ಟ್ರಪತಿ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ ಎಂದು ಬಿಜೆಪಿಯ ಆಪ್ತವಲಯ ತಿಳಿಸಿದೆ.

ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅವಧಿ 2017 ಕ್ಕೆ ಮುಕ್ತಾಯಗೊಳ್ಳಲಿದ್ದು ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವ ವಿಷಯದ ಬಗ್ಗೆ ಮುರಳಿ ಮನೋಹರ್ ಜೋಷಿ ಪ್ರಧಾನಿ ನರೇಂದ್ರ ಮೋದಿ, ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಸೇರಿದಂತೆ ಇನ್ನೂ ಹಲವು ಆರ್ ಎಸ್ ಎಸ್ ನ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.

ಮುಂದಿನ ವರ್ಷ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರದ ಅವಧಿ ಮುಗಿಯಲಿದ್ದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಮುರಳಿ ಮನೋಹರ್ ಜೋಷಿ ಪ್ರಧಾನಿ ಮೋದಿ, ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಇತರೆ ಬಿಜೆಪಿ ಮತ್ತು ಆರ್‍ಸ್‍ಎಸ್ ಮುಖಂಡರನ್ನು ಭೇಟಿಯಾಗಿ ಲಾಬಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇ 22 ರಂದು ಮೋದಿ ಅವರನ್ನು ಭೇಟಿಯಾದ ಜೋಷಿ ರಾಷ್ಟ್ರಪತಿ ಅಭ್ಯರ್ಥಿ ವಿಚಾರವನ್ನೂ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ರು ಅಂತ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಹಾಗು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬಿಜೆಪಿಯಿಂದ ರಾಷ್ಟ್ರಪತಿ ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಚಾರದಲ್ಲಿ ಆರ್‍ಎಸ್‍ಎಸ್‍ನ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಜೋಷಿ ಜೂನ್ ಮೊದಲ ವಾರದಲ್ಲಿ ನಾಗ್ಪುರದಲ್ಲಿ ಆರ್‍ಎಸ್‍ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ರು. ಅಲ್ಲದೆ ಮುಂಬೈನಲ್ಲಿ ಕೂಡ ಜೂನ್ 6 ಮತ್ತು 7ರಂದು ಆರ್‍ಎಸ್‍ಎಸ್ ಮುಖಂಡರನ್ನು ಭೇಟಿಯಾಗಿದ್ರು ಅಂತ ಮೂಲಗಳು ಮಾಹಿತಿ ನೀಡಿವೆ.

ಪ್ರಸ್ತುತ ಪ್ರಧಾನಿ ನರೆಂದ್ರ ಮೋದಿ ಅವರು ಪ್ರತಿನಿಧಿಸುತ್ತಿರುವ ವಾರಾಣಸಿ ಲೋಕಸಭಾ ಕ್ಷೇತ್ರವನ್ನು ಈ ಹಿಂದೆ ಮುರಳಿ ಮನೋಹರ್ ಜೋಷಿ ಪ್ರತಿನಿಧಿಸುತ್ತಿದ್ದರು, ಬಿಜೆಪಿ ಮುರಳಿ ಮನೋಹರ್ ಜೋಷಿ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡಲಿದೆ ಎಂಬ ವರದಿಗಳಿಗೆ ತದ್ವಿರುದ್ಧವೆಂಬಂತೆ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಅಡ್ವಾಣಿ ಅವರ ಫೋಟೊಗಳನ್ನು ಹಾಕಲಾಗಿತ್ತಾದರೂ, ಮುರಳಿಮನೋಹರ್ ಜೋಷಿ ಅವರ ಫೋಟೊಗಳನ್ನು ಹಾಕಿರಲಿಲ್ಲ.

Comments are closed.