ಕರ್ನಾಟಕ

ಜುಲೈ 1 ರಿಂದ ಹೆಲ್ಮೆಟ್ ಇಲ್ಲ ಅಂದರೆ ಪೆಟ್ರೋಲ್ ಇಲ್ಲ

Pinterest LinkedIn Tumblr

ಕಟಕ್ ಜೂ.15 : ಹೆಲ್ಮೆಟ್ ಇಲ್ಲದಿದ್ದರೆ ಜುಲೈ 1 ರಿಂದ ಪೆಟ್ರೋಲ್ ಸಿಗುವುದಿಲ್ಲ ಎಂಬ ನಿಯಮ ಜಾರಿಗೊಳಿಸಲಾದೆ. ಈ ನಿಯಮ ಜಾರಿಗೊಳಿಸಿರುವುದು ಒಡಿಶಾ ರಾಜ್ಯದಲ್ಲಿ. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲು ಹಾಗೂ ಅಪಘಾತ ತಪ್ಪಿಸಲು ಈ ನಿಯಮ ಜಾರಿಗೊಳಿಸಲಾಗುತ್ತಿದೆ. ಈ ಸಂಬಂಧ ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್, ಶೈಕ್ಷಣಿಕ ಸಂಸ್ಥೆಗಳು, ಸರಕಾರಿ ಕಚೇರಿಗಳು, ಪೂಜಾ ಸಮಿತಿಗಳಿಗೆ ಸರ್ಕಾರದಿಂದ ಪತ್ರ ಬರೆಯಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಎ.ಪಿ.ಪಾಧಿ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಹೆಲ್ಮೆಟ್ ಧರಿಸದವರಿಗೆ ಪೆಟ್ರೋಲ್ ನೀಡಬಾರದೆಂದು ಬಂಕ್ ಮಾಲೀಕರಿಗೆ ಸರ್ಕಾರ ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಚಾಲಕರು 5ಕ್ಕಿಂತ ಹೆಚ್ಚು ಬಾರಿ ರಸ್ತೆ ನಿಯಮ ಉಲ್ಲಂಘಿಸಿದರೆ ಚಾಲನಾ ಪರವಾನಗಿ ರದ್ದುಪಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಅಧಿಕಾರಿಗಳು ಕಟ್ಟನಿಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಲಾಗಿದೆ.

ಈ ನಿಯಮ ಜಾರಿಗೊಳಿಸಿರುವುದು ಒಡಿಶಾ ರಾಜ್ಯದಲ್ಲಿ. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲು ಹಾಗೂ ಅಪಘಾತ ತಪ್ಪಿಸಲು ಈ ನಿಯಮ ಜಾರಿಗೊಳಿಸಲಾಗುತ್ತಿದೆ. ಈ ಸಂಬಂಧ ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್, ಶೈಕ್ಷಣಿಕ ಸಂಸ್ಥೆಗಳು, ಸರಕಾರಿ ಕಚೇರಿಗಳು, ಪೂಜಾ ಸಮಿತಿಗಳಿಗೆ ಸರ್ಕಾರದಿಂದ ಪತ್ರ ಬರೆಯಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಎ.ಪಿ.ಪಾಧಿ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Comments are closed.