ಬೆಂಗಳೂರು,ಜೂ.೧೮-ಕೆಪಿಸಿಸಿಯ ನೂತನ ಸಾರಥಿಯಾಗಿ ಇಂಧನ ಸಚಿವ ಡಿ.ಕೆ ಶಿವಕುಮಾರ್ ಸಾರಥ್ಯವಹಿಸಿಕೊಳ್ಳುವುದು ಖಚಿತವಾಗಿದ್ದು ಇದಕ್ಕೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸಿದ್ದಾರೆ.
ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಎಸ್.ಆರ್ ಪಾಟೀಲ್ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೇಳಿಬಂದಿತ್ತು.ಅಂತಿಮವಾಗಿ ಸೋನಿಯಾಗಾಂಧೀ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಮಣೆ ಹಾಕಿದ್ದಾರೆ.
ಸಚಿವ ಶಿವಕುಮಾರ್ ಸದ್ಯ ಒಂದು ವರ್ಷದ ಮಟ್ಟಿಗೆ ಇಂಧನ ಸಚಿವ ಸ್ಥಾನವನ್ನು ಮುಂದುವರಿಸುವಂತೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸಿದ್ದಾರೆ.ಆ ಬಳಿಕ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಸಂಘಟನೆಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವಂತೆಯೂ ಸೂಚಿಸಿದ್ದಾರೆ.
ಇಂದು ಬೆಳಿಗ್ಗೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರು ಸದ್ಯದ ಪರಿಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಶೀವಕುಮಾರ್ ಸೂಕ್ತ ವ್ಯಕ್ತಿ ಎನ್ನುವುದನ್ನು ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲ ಡಿ.ಕೆ ಶಿವಕುಮಾರ್ ಅವರಿಗೆ ಸಾರಥ್ಯ ವಹಿಸಲು ಸೋನಿಯಾಗಾಂಧಿ ಹಾಗು ರಾಹುಲ್ ಗಾಂಧಿ ಸಮ್ಮತಿಸಿದ್ದಾರೆ.
ಸಚಿವ ಸಂಪುಟ ಪುರಚನೆ ಆಗುತ್ತಿದ್ದಂತೆ ಈ ಬಗ್ಗೆ ಪಕ್ಷದ ಹೈಕಮಾಂಡ್ ,ಕೆಪಿಸಿಸಿ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಡಿ.ಕೆ ಶಿವಕುಮಾರ್ ಅವರ ಹೆಸರನ್ನು ಪ್ರಕಟಿಸಲಿದೆ.
ಕರ್ನಾಟಕ
Comments are closed.