ಬೆಂಗಳೂರು: ಸಚಿವ ಸಂಪುಟದಿಂದ ಕೈ ಬಿಟ್ಟಿರುವುದಕ್ಕೆ ಅಸಮಾಧಾನಗೊಂಡು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಂಬರೀಷ್ ಅವರ ಮನವೊಲಿಕೆಗೆ ಪ್ರಯತ್ನ ನಡೆಯುತ್ತಿದೆ.
ಸೋಮವಾರ ಅಂಬರೀಷ್ ಅವರಿಗೆ ದೂರವಾಣಿ ಕರೆ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.
ಮಂಡ್ಯ ಕ್ಷೇತ್ರದ ಶಾಸಕನಾಗಿರುವ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಒಂದೇ ಸಾಲಿನಲ್ಲಿ ರಾಜೀನಾಮೆ ಪತ್ರ ಬರೆದ ಅಂಬರೀಷ್, ತಮ್ಮ ಆಪ್ತ ಕಾರ್ಯದರ್ಶಿಯವರ ಮೂಲಕ ಉಪಸಭಾಧ್ಯಕ್ಷ ಶಿವಶಂಕರ ರೆಡ್ಡಿ ಸಲ್ಲಿಸಿದ್ದರು.
ಆದರೆ ಈ ರಾಜೀನಾಮೆ ಪತ್ರವನ್ನು ಶಿವಶಂಕರ ರೆಡ್ಡಿ ಸ್ವೀಕರಿಸಲು ನಿರಾಕರಿಸಿದ್ದು, ಅಂಬರೀಷ್ ಅವರೇ ಖುದ್ದಾಗಿ ಬಂದು ರಾಜೀನಾಮೆ ಸಲ್ಲಿಸಲಿ ಎಂದು ಸೂಚನೆ ನೀಡಿದ್ದರು.
ಕರ್ನಾಟಕ
Comments are closed.