ಕರ್ನಾಟಕ

ಚಾಮರಾಜನಗರ ಬಂದ್ ಭಾಗಶಃ ಯಶಸ್ವಿ

Pinterest LinkedIn Tumblr

strikeಚಾಮರಾಜನಗರ: ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ವಿ.ಶ್ರೀನಿವಾಸಪ್ರಸಾದ್‌ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟಿರುವುದನ್ನು ವಿರೋಧಿಸಿ ಅವರ ಅಭಿಮಾನಿಗಳು ಕರೆ ನೀಡಿದ್ದ ಚಾಮರಾಜನಗರ ಬಂದ್‌ ಭಾಗಶಃ ಯಶಸ್ವಿಯಾಗಿದೆ.
ಅಭಿಮಾನಿಗಳು ಸೋಮವಾರ ನಗರದಲ್ಲಿ ಟೈರ್‌ ಸುಟ್ಟು ಪ್ರತಿಭಟನೆ ಮಾಡಿದರು. ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.
ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಚಿತ್ರಮಂದಿರಗಳನ್ನು ಬಂದ್‌ ಮಾಡಲಾಗಿದ್ದು, ಕೆಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರ ಸ್ಥಗಿತಗೊಂಡಿದೆ.
ಸಿ.ಎಂ ವಿರುದ್ಧ ಘೋಷಣೆ: ಶ್ರೀನಿವಾಸಪ್ರಸಾದ್‌ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ನಂಜನಗೂಡಿನಲ್ಲೂ ಬಂದ್‌ಗೆ ಕರೆ ನೀಡಲಾಗಿದೆ. ಇಲ್ಲೂ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದ್ದು, ಪ್ರಸಾದ್‌ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ಅಪೊಲೊ ವೃತ್ತ, ಹುಲ್ಲಹಳ್ಳಿ ವೃತ್ತಗಳಲ್ಲಿ ಟೈರ್‌ ಸುಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಎರಡು ಗಂಟೆ ರಸ್ತೆ ಬಂದ್‌ ಮಾಡಿ ಮೆರವಣಿಗೆ ನಡೆಸಿದ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಎಸ್ಪಿ ಅಭಿನವ ಖರೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Comments are closed.