ಬೆಂಗಳೂರು, ಜೂ. ೨೧- ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವವರ ಜೀವ ಉಳಿಸುವ ನಾಗರಿಕರಿಗೆ ಜೀವ ರಕ್ಷಕ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಈ ವರ್ಷದಿಂದಲೇ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ಹೇಳಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಕ್ ಔಷಧಿ ಮಳಿಗೆಗಳನ್ನು ಆರಂಭಿಸುವ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಸದ್ಯದಲ್ಲೇ ಈ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದರು.
ಆರೋಗ್ಯ ಸಚಿವರಾಗಿ ಕೊನೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಆರೋಗ್ಯ ಇಲಾಖೆಯಲ್ಲಿ ಇದುವರೆಗೂ ಜಾರಿಯಾಗಿರುವ ಜನಪರ ಯೋಜನೆಗಳನ್ನು ಮೆಲುಕು ಹಾಕಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲೂ ತೀವ್ರ ನಿಗಾ ಘಟಕಗಳನ್ನು ಆರಂಭಿಸುವ ಯೋಜನೆಯೂ ಪ್ರಗತಿಯಲ್ಲಿದೆ ಎಂದರು.
ಆರೋಗ್ಯ ಸಚಿವನಾಗಿ ಉತ್ತಮವಾಗಿ ಕೆಲಸ ಮಾಡಿದ್ದೇನೆ. ವೈದ್ಯರ ಕೊರತೆಯನ್ನು ನೀಗಿಸಲು ಕ್ರಮಕೈಗೊಂಡು ವೈದ್ಯರ ನೇಮಕಾತಿಗಳನ್ನು ಮಾಡಿ ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆಯನ್ನು ಬಹುತೇಕ ನೀಗಿಸಿದ ತೃಪ್ತಿ ತಮ್ಮದು ಎಂದು, ಆರೋಗ್ಯ ಇಲಾಖೆಯಲ್ಲಿ ಉತ್ತಮವಾಗಿ ಕೆಲಸ ಮಾಡಲು ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಲಾಖೆಯ ಅಧಿಕಾರಿ ಸಿಬ್ಬಂದಿಗಳಿಗೆ ಅವರು ಧನ್ಯವಾದ ಹೇಳಿದರು.
ಆರೋಗ್ಯ ಇಲಾಖೆಯಿಂದ ಆಹಾರ ಖಾತೆಗೆ ತಮ್ಮನ್ನು ವರ್ಗಾಯಿಸಿರುವುದು ಪ್ರಮೋಷನ್ ಇದ್ದ ಹಾಗೆ, ಎರಡೂ ಖಾತೆಗಳ ಸಚಿವನಾಗಿ ಕೆಲಸ ಮಾಡಿದ್ದೇ ಎಂಬುದು ಹೇಳಲು ಅನುಕೂಲವಾಗುತ್ತದೆ ಎಂದವರು ಹಾಸ್ಯದ ದಾಟಿಯಲ್ಲಿ ಹೇಳಿದರು.
ಪಡಿತರ ಚೀಟಿ ವಿತರಣೆ ಸೇರಿದಂತೆ ಕೆಲ ಸಮಸ್ಯೆ, ಗೊಂದಲಗಳಿವೆ ಎಲ್ಲವನ್ನು ಪರಿಹರಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಕರ್ನಾಟಕ
Comments are closed.