ಬೆಂಗಳೂರು, ಜೂ. ೨೧- ಕರ್ನಾಟಕ ರಾಜ್ಯದ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಸ್ಥಾವರ ಸ್ಥಾಪನೆಯ ಆರಂಭಿಕ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮಾತನಾಡಿ, ರಾಜ್ಯವನ್ನು ಕತ್ತಲೆಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವ್ಯಾಪಕ ಬದಲಾವಣೆ ತಂದು ರೈತರಿಗೆ ನಿರಂತರ ವಿದ್ಯುತ್ ಪೂರೈಕೆಯಲ್ಲಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ.
ಯಲಹಂಕದಲ್ಲಿ ಇಂದು 370 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಸ್ಥಾವರ ಸ್ಥಾಪನೆಯ ಆರಂಭಿಕ ಕಾಮಗಾರಿಗೆ ಚಾಲನೆ ನೀಡಿದ್ದು, ಬೆಂಗಳೂರು ನಗರವನ್ನು ಕತ್ತಲುಮುಕ್ತ ನಗರವನ್ನಾಗಿಸಲು ಅಡಿ ಇಟ್ಟಿದೆ.
ಪಾವಗಡದಲ್ಲಿ 12 ಸಾವಿರ ಎಕರೆಯಲ್ಲಿ 2 ಸಾವಿರ ಮೆಗಾ ವ್ಯಾಟ್ ಸಾಮರ್ಥ್ಯದ ಅತಿದೊಡ್ಡ ಸೋಲಾರ್ ಪಾರ್ಕ್ ನಿರ್ಮಿಸಲು ಯೋಜನೆ ಹಮ್ಮಿಕೊಳ್ಳಲಾಗಿದ್ದು, 30 ವರ್ಷಗಳ ಅವಧಿಗೆ ರೈತರಿಂದ ಭೂಮಿಯನ್ನು ಗುತ್ತಿಗೆ ಪಡೆಯಲಾಗಿದೆ ಎಂದು ತಿಳಿಸಿದರು.
ರೈತರಿಗೆ ಹಗಲಲ್ಲೂ ವಿದ್ಯುತ್ ಪೂರೈಸಲು ಹಲವು ಯೋಜನೆಗಳನ್ನು ನಮ್ಮ ಸರ್ಕಾರ ಹಮ್ಮಿಕೊಂಡಿದ್ದು, 100 ತಾಲ್ಲೂಕುಗಳನ್ನು 20 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ಯೋಜನೆ ಸ್ಥಾಪಿಸಲು ಚಿಂತನೆ ನಡೆಸಲಾಗಿದೆ.
ಐದು ವರ್ಷಗಳ ಅವಧಿಯಲ್ಲಿ 9 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹೆಜ್ಜೆ ಇಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರತಿ ವರ್ಷ ವಿದ್ಯುತ್ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಕೂಡ್ಲಗಿ, ಯರಮರತ್, ಬಳ್ಳಾರಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಳ್ಳಿಗಳ ಮಟ್ಟದಲ್ಲಿ ಮೊಟ್ಟಮೊದಲ ಬಾರಿಗೆ ಟ್ರಾನ್ಸ್‌ಫಾರ್ಮರ್ ರಿಪೇರಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಮುಂದುವರೆದ ದೇಶದಂತೆ ನಮ್ಮ ರಾಜ್ಯದಲ್ಲೂ ಕೂಡ ಹಸಿರು ವಿದ್ಯುತ್ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕರ್ನಾಟಕ
Comments are closed.