ಬೆಂಗಳೂರು: “ಸ್ಯಾಂಡಲ್ ವುಡ್”ನಲ್ಲಿ ತನ್ನದೇ ವಿಭಿನ್ನ ಶೈಲಿಯ ಅಭಿನಯದಿಂದಾಗಿ ” ಮಾರಿಮುತ್ತು ” ಎಂಬ ಹೆಸರನ್ನು ಪಡೆದುಕೊಂಡ ಸರೋಜಮ್ಮನವರಿಗೆ ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕುಟುಂಬದವರು ಆಸ್ಪತ್ರೆಗೆ ಸೇರಿಸಿದ್ದಾರೆ.ಅದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನಹೊಂದಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಉಪೇಂದ್ರ’ ಸಿನಿಮಾ ಮೂಲಕ ಅವರು ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಿಟ್ಟಿ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.
ಕಮಲಾನಗರದ ನಿವಾಸದಲ್ಲಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಸರೋಜಮ್ಮ ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು- ಬಳಗ ಅಗಲಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.

Comments are closed.