ಮೈಸೂರು: ಶ್ರೀ ಚಾಮರಾಜೇಂದ್ರ ಎಂಜನಿಯರಿಂಗ್ ಕಾಲೇಜ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಸರಸ್ಪತಿಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯನ್ನು ಪ್ರಜ್ವಲ್ ಪೊನ್ನಣ್ಣ (23) ಎಂದು ಗುರುತಿಸಲಾಗಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ನಿವಾಸಿಗಳಾದ ನಾಚಪ್ಪ ಹಾಗೂ ವಾಣಿ ದಂಪತಿಯ ಪುತ್ರ ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಮೈಸೂರಿನ ಬೋಗಾಧಿಯಲ್ಲಿರುವ ಅವರ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಪ್ರಜ್ವಲ್ ಪೊನ್ನಣ್ಣ, ಮುಂಜಾನೆ ಬಹಳ ಹೊತ್ತು ಕೊಠಡಿ ಬಾಗಿಲು ತೆರೆದು ಹೊರ ಬಾರದಕ್ಕೆ ಅನುಮಾನಗೊಂಡ ಪೋಷಕರು ಬಾಗಿಲು ತೆಗೆದು ನೋಡಿದಾಗ, ಆತ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Comments are closed.