ಕರ್ನಾಟಕ

ಏನಮ್ಮಾ ನೀನು ಲೆಕ್ಕದಲ್ಲಿ ವೀಕಾ: ಸಿಇಒ ನಾಗಾಂಬಿಕೆ ದೇವಿಗೆ ಸಿಎಂ ಸಿದ್ದರಾಮಯ್ಯ ತರಾಟೆ

Pinterest LinkedIn Tumblr

viಬೆಂಗಳೂರು: ಏನಮ್ಮ ನೀನು ಲೆಕ್ಕದಲ್ಲಿ ವೀಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್‌ಡಿಪಿಆರ್ ಕಾರ್ಯದರ್ಶಿಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯರ್ದರ್ಶಿ ನಾಗಾಂಬಿಕೆ ದೇವಿಗೆ ಏನಮ್ಮ ನೀನು ಲೆಕ್ಕದಲ್ಲಿ ವೀಕಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ ಕುರಿತಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ, ಯಾವ ಯಾವ ಊರುಗಳಿಗೆ ಭೇಟಿ ನೀಡಿದ್ದೀರಿ ಎಂದು ಕೇಳಿದಾಗ ಸುಳ್ಳು ಹೇಳಿದ ಸಿಇಒಗಳು ಹಲವು ಹಳ್ಳಿಗಳಿಗೆ ಭೇಟಿ ನೀಡಿದ್ದೇವೆ ಎಂದಿದ್ದಾರೆ.

ಇದರಿಂದ ಆಕ್ರೋಶಗೊಂಡ ಸಿಎಂ, ಯಾವ ಯಾವ ಹಳ್ಳಿಗಳಿಗೆ ಭೇಟಿ ನೀಡಿದ್ದೀರಿ ಹೆಸರುಗಳನ್ನು ಹೇಳಿ ಎಂದು ಕೇಳಿದಾಗ ತಬ್ಬಿಬ್ಬಾದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.

ಮುಂಬರುವ ದಿನಗಳಲ್ಲಿ ಎಸಿ ಕೋಣೆಗಳಿಂದ ಹೊರಬಂದು ಹಳ್ಳಿ ಹಳ್ಳಿಗಳಿಗೆ ತೆರಳಿ ಜನರ ಯೋಗಕ್ಷೇಮ ವಿಚಾರಿಸುವಂತೆ ತಾಕೀತು ಮಾಡಿದ ಸಿಎಂ ಸಿದ್ದರಾಮಯ್ಯ ಇಲ್ಲವಾದರೆ ಕಠಿಣ ಕ್ರಮ ಎದುರಿಸಲು ಸಿದ್ದರಾಗಿ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

Comments are closed.