ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕೆಂದು ನಾನು ಹೇಳಿಲ್ಲ. ನಾಯಕತ್ವ ಬದಲಾವಣೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಹೇಳುವ ಮೂಲಕ ಮಾಜಿ ಸಚಿವ ಖಮರುಲ್ ಇಸ್ಲಾಂ ಯೂಟರ್ನ್ ಹೊಡೆದಿದ್ದಾರೆ.
ಗುರುವಾರ ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಖಮರುಲ್ ಚರ್ಚೆ ನಡೆಸಿದ್ದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಎಂ ನನಗೆ ಪಕ್ಷದಲ್ಲಿ ಸ್ಥಾನಮಾನ ಕಲ್ಪಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.
ನಾಯಕತ್ವ ಬದಲಾವಣೆ ಮಾಡಬೇಕೆಂದು ನಾನು ಹೇಳಿಲ್ಲ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಪ್ರಸ್ತಾಪಕ್ಕೆ ತನ್ನ ಸಹಮತ ಇಲ್ಲ ಎಂದು ಹೇಳಿದರು.
ಇತ್ತೀಚೆಗಷ್ಟೇ ಸಚಿವ ಸಂಪುಟ ಪುನಾರಚನೆಯಲ್ಲಿ ಖಮರುಲ್ ಇಸ್ಲಾಂ ಅವರನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಖಮರುಲ್ ಮತ್ತು ಚಿಂಚನಸೂರ್ ಪತ್ರಿಕಾಗೋಷ್ಠಿ ನಡೆಸಿ ಸಿಎಂ ಮತ್ತು ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದರು.
-ಉದಯವಾಣಿ
Comments are closed.