
ಬೆಂಗಳೂರು: ಸ್ಯಾಂಡಲ್‍ವುಡ್ ಗೊಲ್ಡನ್ ಸ್ಟಾರ್ ಗಣೇಶ್ ಇಂದು 40ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಅಭಿಮಾನಿಗಳ ಸಮ್ಮಖದಲ್ಲಿ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ತಮ್ಮ ನೆಚ್ಚಿನ ನಾಯಕನಿಗೆ ಹುಟ್ಟುಹಬ್ಬದ ಶುಭಾಷಯ ಕೋರಲು ಸಾವಿರಾರು ಜನರು ಗಣೇಶ್ ಮನೆ ಮುಂದೆ ಜಮಾಯಿಸಿ ಸಂಭ್ರಮಿಸಿದರು. ಈ ವೇಳೆ ಗಣೇಶ್‍ಗೆ ಅವರ ಪತ್ನಿ ಶಿಲ್ಪಾ ಗಣೇಶ್ ಸಾಥ್ ನೀಡಿದ್ದರು.
ಗಣೇಶ್ ಹಾಗೂ ರಾಧಿಕಾ ಅಭಿನಯದ ಝೂಮ್ ಚಿತ್ರ ಶುಕ್ರವಾರ ತೆರೆಕಂಡಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬಂದಿರುವುದರಿಂದ ಗಣೇಶ್ ಖುಷಿಯಾಗಿದ್ದಾರೆ. ಚೆಲ್ಲಾಟ, ಮುಂಗಾರು ಮಳೆ, ಗಾಳಿಪಟ ಸೇರಿದಂತೆ ಹಲವಾರು ಹಿಟ್ ಚಿತ್ರಗಳನ್ನು ಗಣೇಶ್ ನೀಡಿದ್ದು, ಇದೀಗ ಮುಂಗಾರು ಮಳೆ ಪಾರ್ಟ್ 2 ಚಿತ್ರದ ಶೂಟಿಂಗ್‍ನಲ್ಲಿ ಬ್ಯೂಸಿಯಾಗಿದ್ದಾರೆ.
Comments are closed.