ಕರ್ನಾಟಕ

ಈದ್ ಮುಬಾರಕ್ : ದೇಶಾದ್ಯಂತ ಪವಿತ್ರ ರಂಜಾನ್ ಆಚರಿಸಿದ ಮುಸ್ಲಿಂ ಬಾಂಧವರು

Pinterest LinkedIn Tumblr

ghaziabad_eid1

ನವದೆಹಲಿ: ಕೇರಳ, ಕರಾವಳಿಯ ಕೆಲವು ಭಾಗಗಳಲ್ಲಿ ಹೊರತುಪಡಿಸಿ, ದೇಶಾದ್ಯಂತ ಮುಸ್ಲಿಂ ಬಾಂಧವರು ಇಂದು ಪವಿತ್ರ ರಂಜಾನ್ ಹಬ್ಬ ಆಚರಿಸಿದರು.

INDIA-RELIGION-ISLAM-EID

ghaziabad_eid2

INDIA-RELIGION-ISLAM-EID

ಹಬ್ಬದ ಹಿನ್ನೆಲೆಯಲ್ಲಿ ಈದ್ಗಾ ಮೈದಾನಗಳು ಹಾಗೂ ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. 30 ದಿನಗಳ ವ್ರತಾಚರಣೆ ನಂತರ, ಚಂದ್ರ ದರ್ಶನ ಮಾಡಿ ರಂಜಾನ್ ಹಬ್ಬ ಆಚರಿಸಲಾಯಿತು.

ಮುಸ್ಲಿಂ ಬಾಂಧವರು ದಾನ ಮಾಡಿ, ಶುಭಾಶಯ ವಿನಿಮಯ ಮಾಡಿಕೊಂಡರು. ಹೊಸ ಬಟ್ಟೆಗಳನ್ನು ಧರಿಸಿ ಮಸೀದಿ, ಈದ್ಗಾ ಮೈದಾನಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನವದೆಹಲಿಯ ಜುಮಾ ಮಸೀದಿಯಲ್ಲಿ ಬೆಳಿಗ್ಗೆಯೇ ಅಪಾರ ಸಂಖ್ಯೆಯಲ್ಲಿ ಸೇರಿದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ರಂಜಾನ್ ಹಿನ್ನಲೆಯಲ್ಲಿ ದೇಶಾದ್ಯಂತ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೆಲವು ಕಡೆಗಳಲ್ಲಿ ಭಾರೀ ಮಳೆಯಾದ ಕಾರಣ, ಈದ್ಗಾ ಮೈದಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ತೊಂದರೆಯಾಗಿದೆ ಎನ್ನಲಾಗಿದೆ.

Comments are closed.