ಬೆಂಗಳೂರು:ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡು ಹೈಕಮಾಂಡ್ ಗೆ ದೂರು ಸಲ್ಲಿಕೆಯಾದ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದ ಮಾಜಿ ಸಚಿವೆ ಶೋಭಾ ಕರಂದ್ಲಾಜೆಯನ್ನು ಹೈಕಮಾಂಡ್ ಹೊರಗಿಟ್ಟಿರುವ ಬೆಳವಣಿಗೆ ನಡೆದಿದೆ. ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಹಿನ್ನಡೆ ಅನುಭವಿಸುವಂತೆ ಮಾಡಿದೆ.
ಬಿಜೆಪಿ ಹೈಕಮಾಂಡ್ ಕೋರ್ ಕಮಿಟಿ ರಚಿಸಿ 12 ಮಂದಿಯ ಹೆಸರನ್ನು ಪ್ರಕಟಿಸಿದೆ. ಅದರಲ್ಲಿ ಶೋಭಾ ಕರಂದ್ಲಾಜೆ, ರವಿಕುಮಾರ್ ಹೆಸರನ್ನು ಕೈಬಿಡಲಾಗಿದೆ ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ.
ಕೋರ್ ಕಮಿಟಿ ಸದಸ್ಯರು: ಬಿಎಸ್ ಯಡಿಯೂರಪ್ಪ, ಅನಂತಕುಮಾರ್, ಡಿವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್, ಆರ್.ಆಶೋಕ್, ಕೆಎಸ್ ಈಶ್ವರಪ್ಪ, ಅರವಿಂದ್ ಲಿಂಬಾವಳಿ, ಉದಾಸಿ, ಸಂತೋಷ್ ಜಿ, ಸಿಟಿ ರವಿ,ಗೋವಿಂದ ಕಾರಜೋಳ.
ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದರು. ಅಲ್ಲದೇ ಶೋಭಾ ಕರಂದ್ಲಾಜೆ ಹಸ್ತಕ್ಷೇಪ ನಡೆಸುತ್ತಿರುವುದಾಗಿ ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಅಸಮಾಧಾನವ್ಯಕ್ತಪಡಿಸಿದ್ದರು. ಅಲ್ಲದೇ ಬಿಜೆಪಿ ಹೈಕಮಾಂಡ್ ಗೂ, ಆರ್ ಎಸ್ ಎಸ್ ಗೂ ಬಿಎಸ್ ವೈ ಮತ್ತು ಶೋಭಾ ವಿರುದ್ಧ ದೂರು ಕೊಟ್ಟಿದ್ದರು. ಬಿಎಸ್ ಯಡಿಯೂರಪ್ಪ ಕೂಡಾ ಈಶ್ವರಪ್ಪ ಮತ್ತು ಅತೃಪ್ತ ಮುಖಂಡರ ವಿರುದ್ಧ ಹೈಕಮಾಂಡ್ ಗೆ ದೂರು ನೀಡಿದ್ದರು.
-ಉದಯವಾಣಿ
Comments are closed.