ಕರ್ನಾಟಕ

ಹಾಸನ ಬಳಿ ಕಾರು – ಖಾಸಗಿ ಬಸ್ ನಡುವೆ ಡಿಕ್ಕಿ; ಕಾರಿನಲ್ಲಿದ್ದ ಯುವತಿ ಸೇರಿ ನಾಲ್ವರು ಸ್ಧಳದಲ್ಲೇ ಸಾವು

Pinterest LinkedIn Tumblr

ac2

ಹಾಸನ: ಮಂಗಳೂರಿನಲ್ಲಿ ವೀಕೆಂಡ್ ಟ್ರಿಪ್ ಮಾಡಲು ಇನೋವಾ ಕಾರಿನಲ್ಲಿ ಹೊರಟ್ಟಿದ್ದವರ ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಇನೋವಾ ಕಾರಿನಲ್ಲಿದ್ದ ಯುವತಿ ಸೇರಿ ನಾಲ್ವರು ಸ್ಧಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನದ ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ 2.45ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಸ್ಧಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ತೀವ್ರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ac

ac1

ಮೃತರಲ್ಲಿ ಕಾರು ಚಾಲಕ ಬೆಂಗಳೂರಿನವನಾಗಿದ್ದು ಶಂಕರ್ ಎಂದು ಗುರುತಿಸಲಾಗಿದೆ. ಇನ್ನು ಮೂವರು ಮಧ್ಯಪ್ರದೇಶದವರು ಎಂದು ತಿಳಿದುಬಂದಿದೆ. ಕಾರು ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಘಟನಾ ಸ್ಥಳಕ್ಕೆ ಹಾಸನ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ದೇಹವನ್ನು ಹಾಸನದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಇಡಲಾಗಿದೆ.

ವೇಗವಾಗಿ ಬರುತ್ತಿದ್ದ ಇನ್ನೋವಾ ಇನ್ನೊಂದು ಕಾರನ್ನು ಓವರ್ ಟೇಕ್ ಮಾಡಲು ಮುಂದಾಗಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಿಂದ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ 75 ರ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಪೊಲೀಸರು ಸ್ಥಳೀಯರ ನೆರವಿನಿಂದ ಸಂಚಾರ ಮುಕ್ತಗೊಳಿಸಿ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು.

Comments are closed.