ಕರ್ನಾಟಕ

ಮೊಬೈಲ್ ಮಾತಲ್ಲಿ ಹಾರಿತು ಜೀವ

Pinterest LinkedIn Tumblr

mobile-menಬೆಂಗಳೂರು, ಜು. ೧೦- ಎರಡನೆ ಮಹಡಿಯ ಮೇಲೆ ನಿಂತು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ಆರ್.ಟಿ. ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಜೆಸಿಬಿ ಕಂಪನಿಯ ಕಛೇರಿಯಲ್ಲಿ ಆಫೀಸ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಸುಂದರ್ (28) ಮೃತ ಯುವಕನಾಗಿದ್ದಾನೆ.
ರಾತ್ರಿ 10.30ರ ವೇಳೆ ಸುಂದರ್ ತಾನು ವಾಸಿಸುತ್ತಿದ್ದ ಬಾಡಿಗೆ ಮನೆಯ ಎರಡನೆ ಮಹಡಿಯ ಮೇಲೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು ಕೂಡಲೆ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಆರ್.ಟಿ. ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Comments are closed.