ಕರ್ನಾಟಕ

ಈಶ್ವರಪ್ಪ ಅವರನ್ನು ಸದನನಿಂದ ಹೊರಹಾಕಿ: ಸಿಎಂ

Pinterest LinkedIn Tumblr

sidduuuಬೆಂಗಳೂರು: ಕೆ.ಎಸ್.ಈಶ್ವರಪ್ಪ ಅವರನ್ನು ಸದನದಿಂದ ಹೊರ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ವಿಧಾನಪರಿಷತ್‌ನಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು ಇದು ಕೊಲೆಗಡುಕ ಸರ್ಕಾರ. ಜಾರ್ಜ್‌ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿಗಳು ಜಾರ್ಜ್ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಎಂದು ದೂರಿದರು.

ಇದರಿಂದ ಕೆರಳಿದ ಸಿದ್ದರಾಮಯ್ಯ, ಈಶ್ವರಪ್ಪ ಅವರನ್ನು ಸದನದಿಂದ ಹೊರಹಾಕಿ ಎಂದು ಆಗ್ರಹಿಸಿದರು.

ವಿರೋಧ ಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಲ್ಲದೇ, ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಸಭಾಪತಿಗಳ ಪೀಠದ ಎದುರು ಧರಣಿ ನಡೆಸಿದರು. ಇದರಿಂದ ಗದ್ದಲ ಹೆಚ್ಚಾದಾಗ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ಸದನವನ್ನು 20 ನಿಮಿಷಗಳ ಕಾಲ ಮುಂದೂಡಿದರು.

Comments are closed.