ಧಾರವಾಡ: ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹಣ ನೀಡಿದಂತೆ ಕಾಣುತ್ತಿದೆ. ಅದಕ್ಕೆ ಕೆ.ಜೆ.ಜಾರ್ಜ್ ರಾಜೀನಾಮೆ ಬೇಡ ಅಂತಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ, ಮಂಗಳೂರು ಡಿವೈಎಸ್‌ಪಿ ಎಂ.ಕೆ. ಆತ್ಮಹತ್ಯೆ ಪ್ರಕರಣ ಕುರಿತು ಜುಲೈ 18 ರಂದು ಕೇಂದ್ರ ಗೃಹ ಸಚಿವರೊಂದಿಗೆ ಚರ್ಚಿಸುತ್ತೇನೆ. ಈ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪಿಸುತ್ತೇನೆ ಎಂದು ತಿಳಿಸಿದರು.
ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಬಳಿ ಹಣ ಪಡೆದಂತಿದೆ. ಅದಕ್ಕೆ ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವುದು ಬೇಡ ಎನ್ನುತ್ತಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆತ್ಮಸ್ಥೈರ್ಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಕೆ.ಜೆ.ಜಾರ್ಜ್ ಅವರು ಹಾಲು ಕರೆಯುವ ಕೆಚ್ಚಲಿದಂತೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
Comments are closed.