ಚಿಕ್ಕಮಗಳೂರು: ಇಲ್ಲಿನ ಅಯ್ಯಪ್ಪ ನಗರದಲ್ಲಿ ಮನೆ ನಿರ್ಮಾಣಕ್ಕೆ ಆರ್ಸಿಸಿ ಹಾಕುವಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ಕಟ್ಟಡ ನಿರ್ಮಾಣ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಶಂಕರಪುರ ನಿವಾಸಿಗಳಾದ ವಿಶ್ವನಾಥ(30), ಪಾಂಡು (24) ಮೃತಪಟ್ಟ ಕಾರ್ಮಿಕರು.
ಇನ್ನಿಬ್ಬರು ಕಾರ್ಮಿಕರು ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.