ಯಾದಗಿರಿ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಸುರಪುರ ತಾಲ್ಲೂಕು ಕರೀಬಾವಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶಂಕರಪ್ಪ ಹೂಗಾರ (55) , ಆತನ ಮಗಳಾದ ವೆಂಕಮ್ಮ ಹೂಗಾರ (35) ಎಂದು ಗುರುತಿಸಲಾಗಿದೆ.ಗ್ರಾಮದಲ್ಲಿರುವ ಜಮೀನಿನ ಬಗ್ಗೆ ಕೆಲವರು ಇವರಿಗೆ ಬೆದರಿಕೆ ಹಾಕಿದ್ದರು. ಇದರ ನಡುವೆ ಕಳೆದ ಒಂದು ತಿಂಗಳ ಹಿಂದೆಯಷ್ಟೇ ವೆಂಕಮ್ಮ ಅವರ ಪತಿ ಸಿದ್ದಣ್ಣ ಪೂಜಾರ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.
ಈ ಸಂಬಂಧ ಕೆಲವರನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದರು. ಆದರೆ ಜಾಮೀನಿನ ಮೇಲೆ ಹೊರ ಬಂದ ಆರೋಪಿಗಳು ಕಳೆದ ರಾತ್ರಿ ತಂದೆ-ಮಗಳನ್ನು ಕೂಡ ಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಇವರ ಸಂಬಂಧಿಯಾದ ಸಿದ್ದಪ್ಪನ ಕುಟುಂಬದವರು ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಂಬಾವಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಕೊಲೆಗಾರರ ಪತ್ತೆಗೆ ಬಲೆ ಬೀಸಲಾಗಿದೆ.
Comments are closed.