ಮಡಿಕೇರಿ: ಗಣಪತಿ ಆತ್ಮಹತ್ಯೆ ಪ್ರಕರಣದ ಸಂಬಂಧ ಮೂವರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಇಲ್ಲಿನ ನಗರ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಠಾಣೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಸಂಜೆಯೊಳಗೆ ಎಫ್‌ಐಆರ್ ದಾಖಲಿಸದಿದ್ದರೆ ಠಾಣೆಗೆ ಮುತ್ತಿಗೆ ಹಾಕುವುದಾಗಿ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳು ಬೆಳಿಗ್ಗೆ ಎಚ್ಚರಿಕೆ ನೀಡಿದ್ದವು. ಹೆಚ್ಚಿನ ಪೊಲೀಸ್ ಭದ್ರತಗೆ ಒದಗಿಸಲಾಗಿತ್ತು.
ಪ್ರಕರಣದಲ್ಲಿ ಆರೋಪಿಗಳಾಗಿರುವ ಸಚಿವ ಕೆ.ಜೆ. ಜಾರ್ಜ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಡಿಕೇರಿ ಜೆಎಂಎಫ್ ನ್ಯಾಯಾಲಯ ಸೋಮವಾರ ಸಂಜೆ ಆದೇಶ ನೀಡಿತ್ತು. ಆದರೆ, ಈವರೆಗೂ ಎಫ್‌ಐಆರ್ ದಾಖಲಿಸಿಕೊಂಡಿಲ್ಲ.
ಎಫ್‌ಐಆರ್ ದಾಖಲಿಸಲು ಸೂಚಿಸಿರುವ ನ್ಯಾಯಾಲಯ ಆಗಸ್ಟ್ 5ರ ವರೆಗೆ ಕಾಲಾವಕಾಶ ನೀಡಿದೆ.
ಪ್ರಕರಣ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಎ.ಎಂ. ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.
Comments are closed.