ಮೈಸೂರು,ಜು. ೨೧- ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಲಂಚ ನೀಡುವ ಸಂದರ್ಭದಲ್ಲಿ ಲೋಕಾಯುಕ್ತ ಪೋಲಿಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಗೈರು ಹಾಜರಾದ ಸಚಿವ ಮಹದೇವಪ್ಪನವರ ಪುತ್ರ ಸುನೀಲ್ ಬೋಸ್ ಗೆ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತು.
ಇಂದು ಬೆಳಗ್ಗೆ ಮೈಸೂರಿನ 3 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಧೀಶರಾದ ಸುರೇಂದ್ರನಾಥ್ ರವರು ಈ ಮೊಕದ್ದಮೆಯನ್ನು ಕೈಗೆತ್ತುಕೊಂಡು ಸುನೀಲ್ ಬೋಸ್ ಇಂದಿಗೂ ಸಹ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದರು.
2012 ರಲ್ಲಿ ಸುನೀಲ್ ಬೋಸ್ ಮೈಸೂರು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಲಂಚ ನೀಡುವ ಸಂದರ್ಭದಲ್ಲಿ ಲೋಕಾಯುಕ್ತ ಪೋಲಿಸರಿಗೆ ಸಿಕ್ಕಿಬಿದ್ದಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್ ಜಾರಿ ಮಾಡಿಲಾಗಿದ್ದರು ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಹ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಈ ಪ್ರಕರಣದ ಮುಂದಿನ ವಿಚಾರಣೆಯು ಆ 4 ರಂದು ನಡೆಯಲಿದೆ.
Comments are closed.