ಕರ್ನಾಟಕ

ನೇಣು ಹಾಕಿಕೊಂಡು ಹೆಡ್ ಕಾನ್‍ಸ್ಟೇಬಲ್ ಆತ್ಮಹತ್ಯೆ

Pinterest LinkedIn Tumblr

hang

ಕಲ್ಬುರ್ಗಿ: ನಗರ ಹೊರವಲಯದ ತಾಜಸುಲ್ತಾನಪುರದಲ್ಲಿ ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ(ಕೆಎಸ್‍ಆರ್‍ಪಿ)ಯ ಹೆಡ್ ಕಾನ್‍ಸ್ಟೇಬಲ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸ್ ಕ್ವಾಟ್ರರ್ಸ್‍ನಲ್ಲಿ ವಾಸವಾಗಿದ್ದ ಅಣ್ಣಾರಾವ್(47) ಮೃತ ದುರ್ದೈವಿ. ಈ ಹಿಂದೆ ವಿಜಯಪುರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರನ್ನು ಇತ್ತೀಚೆಗಷ್ಟೇ ಗುಲ್ಬರ್ಗಕ್ಕೆ ವರ್ಗಾವಣೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ನಿನ್ನೆ ಕರ್ತವ್ಯಕ್ಕೆ ಹಾಜರಾಗಿ ಮನೆಗೆ ಬಂದು ರಾತ್ರಿ ತಮ್ಮ ಕೋಣೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯರು ಇಂದು ಬೆಳಗ್ಗೆ ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ 20 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರಿಗೆ ಹಲವು ಬಾರಿ ವರ್ಗಾವಣೆಯಾಗಿತ್ತು.

ಕಳೆದ ಒಂದು ವರ್ಷದ ಹಿಂದೆಯಷ್ಟೇ ವಿಜಯಪುರದಲ್ಲಿದ್ದ ಅವರನ್ನು ಪುನಃ ಕಲ್ಬುರ್ಗಿಗೆ ವರ್ಗಾವಣೆ ಮಾಡಿದ್ದರಿಂದ ಮಾನಸಿಕವಾಗಿ ಮನನೊಂದಿದ್ದರು ಎಂದು ತಿಳಿದುಬಂದಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Comments are closed.