ಕರ್ನಾಟಕ

ಎಸ್ಮಾ ಜಾರಿ ಮಾಡಿ ಅಂತ ಸರ್ಕಾರಕ್ಕೆ ಸೂಚಿಸಲು ಆಗಲ್ಲ: ಹೈಕೋರ್ಟ್

Pinterest LinkedIn Tumblr

high-courtಬೆಂಗಳೂರು:ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿರುದ್ಧ ಎಸ್ಮಾ ಜಾರಿಗೊಳಿಸಿ ಎಂದು ಸರ್ಕಾರಕ್ಕೆ ಸೂಚಿಸಲು ಸಾಧ್ಯವೇ? ಸರ್ಕಾರ ಅದನ್ನು ಜಾರಿಗೊಳಿಸಬೇಕು, ನಾವು ಬಲವಂತ ಮಾಡಲು ಆಗಲ್ಲ ಎಂದು ಪಿಐಎಲ್ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ತಿಳಿಸಿದೆ.

ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿರುದ್ದ ಸರ್ಕಾರ ಎಸ್ಮಾ ಜಾರಿಗೊಳಿಸಲು ಹಿಂದೇಟು ಹಾಕುತ್ತಿದೆ. ಹಾಗಾಗಿ ಎಸ್ಮಾ ಜಾರಿಗೊಳಿಸಲು ನಿರ್ದೇಶನ ನೀಡಬೇಕೆಂದು ಕೋರಿ ಆರ್.ವಾಸುದೇವ್ ಎಂಬುವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ಈ ಅಭಿಪ್ರಾಯವ್ಯಕ್ತಪಡಿಸಿದೆ.

ಸಾರಿಗೆ ನೌಕರರ ಮುಷ್ಕರದ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಸೂಚಿಸಿರುವ ಪೀಠ, ಒಂದು ವಾರದಲ್ಲಿ ಮನವಿ ಇತ್ಯರ್ಥಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
-ಉದಯವಾಣಿ

Comments are closed.