ಬೆಂಗಳೂರು: ಶೇ.10ಕ್ಕಿಂತಲೂ ವೇತನ ಹೆಚ್ಚಳ ಸಾಧ್ಯವಿಲ್ಲ. ಸಾರಿಗೆ ನೌಕರರು ಹಠಮಾರಿ ಧೋರಣೆ ಕೈಬಿಟ್ಟು ಮುಷ್ಕರ ವಾಪಸ್ ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮತ್ತೊಮ್ಮೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸುವ ಮೂಲಕ ಸಾರಿಗೆ ನೌಕರರ ಮತ್ತು ಸರ್ಕಾರದ ನಡುವೆ ಹಗ್ಗ ಜಗ್ಗಾಟ ಮುಂದುವರಿಯುವಂತಾಗಿದೆ.
ಸಾರಿಗೆ ನೌಕರರ ಮುಷ್ಕರದ ಕುರಿತು ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಷ್ಕರದಿಂದ ಜನರಿಗೆ ಅನಾನುಕೂಲವಾಗುತ್ತಿರುವುದು ನಿಜ. ಈಗಾಗಲೇ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಹಾಗಾಗಿ ಶೇ.8ರಿಂದ ಶೇ.10ಕ್ಕಿಂತಲೂ ವೇತನ ಹೆಚ್ಚಳ ಅಸಾಧ್ಯ ಎಂದು ತಿಳಿಸಿದ್ದಾರೆ.
ಲಾಭ ಮಾಡುವ ಉದ್ದೇಶ ಸಾರಿಗೆ ಇಲಾಖೆಗೆ ಇಲ್ಲ. ದಯವಿಟ್ಟು ನೌಕರರು ಹಠಮಾರಿ ಧೋರಣೆ ಬಿಟ್ಟು ಮುಷ್ಕರ ವಾಪಸ್ ಪಡೆಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.
ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದು ಸಾರಿಗೆ ನೌಕರರು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ಇಂದು 2ನೇ ದಿನಕ್ಕೆ ಕಾಲಿಟ್ಟಿದೆ.
-ಉದಯವಾಣಿ
Comments are closed.