ಕರ್ನಾಟಕ

ಪುತ್ರ ರಾಕೇಶ್ ಸಾವಿಗೆ ಸಂತಾಪ ಸೂಚಿಸಿದ ಎಲ್ಲರಿಗೂ ಧನ್ಯವಾದ: ಸಿಎಂ

Pinterest LinkedIn Tumblr

rakesh-31

ಬೆಂಗಳೂರು: ನನ್ನ ಪುತ್ರ ರಾಕೇಶ್ ಸಾವಿಗೆ ಸಂತಾಪ ಸೂಚಿಸಿದ ಎಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಬೆಲ್ಜಿಯಂನಿಂದ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಿಎಂ ಪುತ್ರ ರಾಕೇಶ್ ಸಾವಿಗೆ ಸಂತಾಪ ಸೂಚಿಸಿದ್ದರು.

ಬೆಲ್ಜಿಯಂ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ರಾಕೇಶ್(39) ಅವರು ಬಹು ಅಂಗಾಂಗ ವೈಫಲ್ಯದಿಂದ ಶನಿವಾರ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಇಂದು ಬೆಂಗಳೂರಿಗೆ ವಿಶೇಷ ವಿಮಾನ ಮೂಲಕ ತರಲಾಗುತ್ತಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ರಾಕೇಶ್ ಪಾರ್ಥಿವ ಶರೀರವನ್ನು ನೇರವಾಗಿ ಮೈಸೂರಿಗೆ ಕೊಂಡಯ್ಯಲಾಗುತ್ತಿದೆ. ಮೈಸೂರಿನ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ.

ಕಳೆದ ಒಂದು ವಾರದಿಂದ ಬೆಲ್ಜಿಯಂನ ಬ್ರಷಲ್ಸ್ ನ ಆಂಟ್ ವರ್ಪ್ ಯೂನಿರ್ವಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಕೇಶ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಕೊನೆಯುಸಿರೆಳೆದಿದ್ದಾರೆ.

Comments are closed.