ಕರ್ನಾಟಕ

ಮೋದಿಯನ್ನು ಕೃಷ್ಣದೇವರಾಯರಿಗೆ ಹೋಲಿಸಿದ ರಾಜನಾಥ ಸಿಂಗ್!

Pinterest LinkedIn Tumblr

rajಬೆಂಗಳೂರು: ಕೃಷ್ಣದೇವರಾಯರು ಪ್ರಜೆಗಳ ಅಭಿವೃದ್ಧಿಯ ಗುರಿಯನ್ನು ಹೊಂದಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಅದೇ ಮಾದರಿಯಲ್ಲಿ ನಡೆಯುತ್ತಿದ್ದಾರೆ ಎಂದು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದರು.

ರಾಜೂ ಕ್ಷತ್ರೀಯ ಸಂಘದ ಸಮಾವೇಶದಲ್ಲಿ ಮಾತನಾಡಿದ ಅವರು, ಕೃಷ್ಣದೇವರಾಯನ ಕಾಲದಲ್ಲಿ ವಿದೇಶಿ ಬಂಡವಾಳದಾರರು ಭಾರತ ದೇಶದಲ್ಲಿ ಹೂಡಿಕೆ ಮಾಡುತ್ತಿದ್ದರು. ಅದರಂತೆ, ಇಂದು ನಮ್ಮ ಸರಕಾರದಲ್ಲಿಯೂ ಸಾಕಷ್ಟು ಬಂಡವಾಳ ಹೂಡಿಕೆಯಾಗಿದೆ ಎಂದು ತಿಳಿಸಿದರು.

ವಿಜಯನಗರ ಸಾಮ್ರಾಜ್ಯದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಸಮರ್ಪಕವಾಗಿ ಬಳಕೆಯಾಗುತ್ತಿತ್ತು. ಇಗ ನಾವು ವಿಜ್ಞಾನ ಹಾಗೂ ತಂತ್ರಜ್ಞಾನವನ್ನು ಬಳಸಿಕೊಂಡು ದೇಶವನ್ನು ಶಕ್ತಿಶಾಲಿ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಜಿಎಸ್‌ಟಿ ಮಸೂದೆಯನ್ನು ಜಾರಿಗೆ ತರಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಷ್ಠಪುತ್ರ ರಾಕೇಶ್ ನಿಧನಕ್ಕೆ ಸಂತಾಪ ಸೂಚಿಸಿದ ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಸಾಂತ್ವನ ಹೇಳಬೇಕಿತ್ತು. ಆದರೆ, ಅವರು ಬೆಲ್ಜಿಯಂ ದೇಶಕ್ಕೆ ತೆರಳಿರುವುದು ತಿಳಿದು ಬಂದಿದೆ ಎಂದು ತಿಳಿಸಿದರು.

Comments are closed.