ಕರ್ನಾಟಕ

ಹುಟ್ಟುಹಬ್ಬ ಸಂಭ್ರಮ ಬೇಡ: ಜಿ.ಪಿ ಮನವಿ

Pinterest LinkedIn Tumblr

Parameshwara-

ಬೆಂಗಳೂರು, ಆ. ೨- ಈ ಬಾರಿಯ ತಮ್ಮ ಹುಟ್ಟುಹಬ್ಬವನ್ನು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಬಂಧುಗಳು ಅದ್ದೂರಿಯಾಗಿ ಆಚರಿಸದಂತೆ ಹಾಗೂ ಹುಟ್ಟುಹಬ್ಬದ ಶುಭಾಶಯ ಕೋರುವ ಯಾವುದೇ ಪ್ಲೆಕ್ಸ್, ಬ್ಯಾನರ್ ಹಾಗೂ ಜಾಹೀರಾತುಗಳನ್ನು ನೀಡದಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮನವಿ ಮಾಡಿದ್ದಾರೆ.

ಈ ತಿಂಗಳ 6 ರಂದು ತಮ್ಮ ಹುಟ್ಟುಹಬ್ಬವಿದ್ದು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿ ಆಚರಣೆಗೆ ಮುಂದಾಗಬಾರದು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಉತ್ತರ ಕರ್ನಾಟಕದ ರೈತರು ಕಳಸ ಬಂಡೂರಿ ಹೋರಾಟ ಸಮಿತಿ ಹಾಗೂ ಹಲವು ಕನ್ನಡಪರ ಸಂಘಟನೆಗಳು ಮಹದಾಯಿ ಯೋಜನೆಯ ಕುಡಿಯುವ ನೀರಿಗಾಗಿ ಹೋರಾಟ ನಡೆಸಿದ್ದಾರೆ.
ನ್ಯಾಯಾಧೀಕರಣದಿಂದಲೂ ರಾಜ್ಯದ ಜನತೆಗೆ ನ್ಯಾಯ ಸಿಕ್ಕಿಲ್ಲ. ಜತೆಗೆ ಗೃಹ ಇಲಾಖೆಯಲ್ಲಿನ ಇತ್ತೀಚಿನ ಕೆಲವು ಕಹಿ ಘಟನೆಗಳು, ಮುಖ್ಯಮಂತ್ರಿ ಪುತ್ರ ರಾಕೇಶ್ ಸಿದ್ದರಾಮಯ್ಯರವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಹುಟ್ಟಹಬ್ಬ ಆಚರಣೆಗೆ ಆಸಕ್ತಿಯೂ ಇಲ್ಲ, ಮನಸ್ಸೂ ಒಪ್ಪುತ್ತಿಲ್ಲ. ಹಾಗಾಗಿ ಹುಟ್ಟುಹಬ್ಬ ಆಚರಣೆ ಬೇಡ ಎಂದು ಅವರು ತಿಳಿಸಿದ್ದಾರೆ.

Comments are closed.