ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಹಾಗೂ ಇನ್ನು ಮುಂದೆ ಇಂಥಾ ಹಾನಿಗಳು ಸಂಭವಿಸದಂತೆ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಳೆ ಸಂಬಂಧಿತ ಅವಾಂತರಗಳ ಕುರಿತು ಚರ್ಚೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಿಎಂ ಇನ್ನು ಮುಂದೆ ಈ ರೀತಿಯ ಸಮಸ್ಯೆಗಳಾಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದಾರೆ.
ಈ ಸಭೆಯಲ್ಲಿ ಮಳೆ ಸಂಬಂಧಿತ ಹಾನಿ ಪರಿಹಾರಕ್ಕೆ ರು.160 ಕೋಟಿ ರೂಪಾಯಿ ಹೆಚ್ಚುವರಿ ಹಣ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
Comments are closed.