ಕರ್ನಾಟಕ

ಉಪನ್ಯಾಸಕಿಯ ಸರ ಕಳವು

Pinterest LinkedIn Tumblr

chain-snatching-brings-hope-715x400ಬೆಂಗಳೂರು, ಆ. ೧೧ – ಕಾಲೇಜಿಗೆ ಬಸ್‌ನಲ್ಲಿ ಹೋಗಲು ನಡೆದುಕೊಂಡು ಹೋಗುತ್ತಿದ್ದ ಉಪನ್ಯಾಸಕಿಯೊಬ್ಬರ ಮಾಂಗಲ್ಯ ಸರವನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕಸಿದು ಪರಾರಿಯಾಗಿರುವ ಘಟನೆ ಇಂದು ಬೆಳಿಗ್ಗೆ ಬಸವೇಶ್ವರನಗರದಲ್ಲಿ ನಡೆದಿದೆ.

ಆರ್‌ವಿ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ಸವಿತಾ ಅವರು ಬೆಳಿಗ್ಗೆ 8.15ರ ವೇಳೆ ಮಹಾಗಣಪತಿ ನಗರದ ಮನೆಯಿಂದ ಹತ್ತಿರದ ಬಸ್ ನಿಲ್ದಾಣಕ್ಕೆ ಕಾಲೇಜಿಗೆ ಹೋಗಲು ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಬೈಕ್‌ನಲ್ಲಿ ಹಿಂದಿನಿಂದ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕತ್ತಿನಲ್ಲಿದ್ದ 70 ಸಾವಿರ ಮೌಲ್ಯದ 25 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಬಸವೇಶ್ವನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Comments are closed.