ಬೆಂಗಳೂರು,ಆ.೧೨-ಕಾಲೇಜ್ ಬಸ್ ಡಿಕ್ಕಿ ಹೊಡೆದು ಸೈಕಲ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಸರ್ಜಾಪುರ ರಸ್ತೆಯ ಟೋಟಲ್ ಮಾಲ್ ಬಳಿ ನಿನ್ನೆ ರಾತ್ರಿ ನಡೆದಿದೆ.
ಬೆಳ್ಳಂದೂರಿನ ದೇವರಾಜ್(೪೦)ಮೃತಪಟ್ಟವರು ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ದೇವರಾಜ್ ಅವರು ನಿನ್ನೆ ರಾತ್ರಿ ಟೋಟಲ್ ಮಾಲ್ ಮುಂಭಾಗದ ರಸ್ತೆಯಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಅಮೃತ್ ಇನ್ಸಿಟ್ಯೂಟ್ ಕಾಲೇಜಿನ ಬಸ್ ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಹೆಚ್‌ಎಸ್‌ಆರ್ ಲೇಔಟ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Comments are closed.