ಕರ್ನಾಟಕ

ಅಭಿಪ್ರಾಯ ಪಡೆದು ಬಿಬಿಎಂಪಿ ಮೈತ್ರಿ: ಯಡಿಯೂರಪ್ಪ

Pinterest LinkedIn Tumblr

bsyಬೆಂಗಳೂರು, ಆ. ೧೪ – ಬಿಬಿಎಂಪಿಯಲ್ಲಿ ಅಧಿಕಾರ ಹಿಡಿಯಲು ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಪಕ್ಷದ ಎಲ್ಲರ ಅಭಿಪ್ರಾಯ ಪ‌ಡೆಯಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಇಂದು ಇಲ್ಲಿ ಹೇಳಿದರು.

ನಗರದ ಬಸವನಗುಡಿ ನ್ಯಾಷನಲ್ ಕಾಲೇಜು ಆಟದ ಮೈದಾನದಲ್ಲಿ ವಾಹನ ಚಾಲಕರ ಪೋಸ್ಟ್ ಕಾರ್ಡ್ ಅಭಿಯಾನದ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಜತೆಗಿನ ಮೈತ್ರಿ ವಿಷಯದ ಬಗ್ಗೆ ನಾಳಿದ್ದು ನಾಡೆಯುವ ಕೋರ್ ಕಮಿಟಿ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಪಕ್ಷದ ಶಾಸಕರು, ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿ ಮೈತ್ರಿ ವಿಚಾರವಾಗಿ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಅವರು ತಿಳಿಸಿದರು.

Comments are closed.