ಕರ್ನಾಟಕ

ಬಿಬಿಎಂಪಿಯಲ್ಲಿ ಕಾಂಗ್ರೆಸ್, ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ನ್ಯೂಟ್ರಲ್ ಆಗಿರುತ್ತೇವೆ: ಜಮೀರ್ ಅಹ್ಮದ್

Pinterest LinkedIn Tumblr

jameerಬೆಂಗಳೂರು: ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆ ಜೆಡಿಎಸ್‌ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಾರಿ ನಾವು ನ್ಯೂಟ್ರಲ್ ಆಗಿರುತ್ತೇವೆ ಎಂದು ಜೆಡಿಎಸ್ ಪಕ್ಷದಿಂದ ಅಮಾನತಾದ ಶಾಸಕ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆ 5 ವರ್ಷ ಮೈತ್ರಿಗೆ ತೀರ್ಮಾನಿಸಲಾಗಿತ್ತು. ಕಳೆದ ಬಾರಿ ನಮ್ಮ ನೇತೃತ್ವದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯಾಗಿತ್ತು. ಆದರೆ, ಈ ಬಾರಿ ಜೆಡಿಎಸ್ ವರಿಷ್ಠ ಎಚ್‌ಡಿ.ದೇವೇಗೌಡರು ನಮ್ಮ ಜೊತೆ ಚರ್ಚಿಸಿಲ್ಲ ಎಂದು ತಿಳಿಸಿದರು.

ಬಿಬಿಎಂಪಿಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಹೀಗಾಗಿ ಎಲ್ಲವನ್ನು ರಾಮಲಿಂಗಾರೆಡ್ಡಿ ಅವರಿಗೆ ಬಿಟ್ಟಿದ್ದೇವೆ ಎಂದು ಜೆಡಿಎಸ್ ಪಕ್ಷದಿಂದ ಅಮಾನತಾದ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

Comments are closed.