ಬೆಂಗಳೂರು, ಆ. ೧೫ – ಯಕೃತ್ ಕಸಿ ಯೋಜನೆಗೆ ಸರ್ಕಾರದಿಂದ ನೆರವು ನೀಡಲು ತಮ್ಮ ಪುತ್ರ ರಾಕೇಶ್ ಹೆಸರಿನಲ್ಲಿ ಹೊಸ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 219ನೇ ಜಯಂತಿ ಅಂಗವಾಗಿ ನಗರದ ಮೆಜೆಸ್ಟಿಕ್‌ನ ಖೋಡೆಸ್ ವೃತ್ತದಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಸಂದರ್ಭದಲ್ಲಿ ಕನ್ನಡ ಚಳವಳಿ ನಾಯಕ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ರಾಕೇಶ್ ಸಿದ್ದರಾಮಯ್ಯ ಹೆಸರಿನಲ್ಲಿ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುವಂತೆ ಮಾಡಿದ ಸಲಹೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಡ ಜನರ ಯಕೃತ್ ಹಾಗೂ ಪಿತ್ತ ಜನಕಾಂಗ ಕಸಿ ಯೋಜನೆಗೆ ಹೊಸ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸುವುದಾಗಿ ಹೇಳಿದರು.
Comments are closed.