ತುಮಕೂರು, ಆ.16- ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ತಾಲ್ಲೂಕಿನ ತೊಗರಿಗುಂಟೆ ಗ್ರಾಮದಲ್ಲಿ ನಡೆದಿದೆ.ಶ್ವೇತಾ (25) ಮೃತಪಟ್ಟ ಮಹಿಳೆ.
ಕೊರಟಗೆರೆ ತಾಲ್ಲೂಕಿನ ಕೊಡಿಗೇನಹಳ್ಳಿ ಗ್ರಾಮದ ಶ್ವೇತಾಳನ್ನು ಕಳೆದ ಮೂರು ವರ್ಷಗಳ ಹಿಂದೆ ತೊಗರಿಗುಂಟೆ ಗ್ರಾಮದ ಶ್ರೀನಿವಾಸನಿಗೆ ಕೊಟ್ಟು ವಿವಾಹ ಮಾಡಲಾಗಿತ್ತು.ಈತನಿಗೆ ಒಂದು ವರ್ಷದ ಮಗುವಿದ್ದು, 7 ತಿಂಗಳ ಗರ್ಭಿಣಿಯಾಗಿದ್ದಳು. ಅತ್ತೆ, ಮಾವ, ಗಂಡ ವರದಕ್ಷಿಣೆ ಹಣ ತರುವಂತೆ ಪದೇ ಪದೇ ಕಿರುಕುಳ ನೀಡಿದ ಪರಿಣಾಮ ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಂದೆ ಶಿರಾ ನಗರ ಠಾಣೆಗೆ ದೂರು ನೀಡಿದ್ದಾರೆ.
ನಗರ ಠಾಣೆಯ ಸಿಪಿಐ ಲಕ್ಷ್ಮಣ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ತಹಸೀಲ್ದಾರ್ ಹೊನ್ನೇಸ್ವಾಮಿ, ಕಂದಾಯ ಇಲಾಖೆ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Comments are closed.