ಬೆಂಗಳೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ತಾನೂ ನೇಣಿಗೆ ಶರಣಾದ ದಾರುಣ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಿಗೊಂಡನ ಹಳ್ಳಿಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕೌಟುಂಬಿಕ ಸಮಸ್ಯೆಗಳಿಂದಾಗಿ 35 ವರ್ಷದ ಸತೀಶ್ ಎಂಬುವವರು ತನ್ನ ಪತ್ನಿ ಮಂಜುಳಾ (23) ಮಕ್ಕಳಾದ ವಿಜಯ್ (5)ಮತ್ತು ಶ್ರೇಯಾ(2) ರನ್ನು ಕತ್ತು ಹಿಸುಕಿ ಕೊಲೆ ಮಾಡಿ ನಂತರ ನೇಣಿಗೆ ಶರಣಾಗಿದ್ದಾನೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕುಡಿದು ಬಂದಿದ್ದ ಸತೀಶ್ ತನ್ನ ಪತ್ನಿ ಮಂಜುಳಾಳೊಂದಿಗೆ ಜಗಳ ಮಾಡಿದ್ದಾನೆ. ಜಗಳ ವಿಕೋಪಕ್ಕೆ ಹೋಗಿ ಸತಿಶ್ ಪತ್ನಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾನೆ. ಬಳಿಕ ಮಕ್ಕಳನ್ನು ಹತ್ಯೆ ಮಾಡಿ ತಾನು ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಕುಂಬಳಗೋಡು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Comments are closed.