ಕರ್ನಾಟಕ

ಎಬಿವಿಪಿ ಪ್ರತಿಭಟನೆ ಹಿಂದೆ ಬಿಜೆಪಿ ಕೈವಾಡ ಇದೆ; ಪರಮೇಶ್ವರ್

Pinterest LinkedIn Tumblr

G.-Parameshwaraಬೆಂಗಳೂರು: ಭಾರತೀಯ ಸೈನ್ಯದ ವಿರುದ್ಧ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ಕಾರ್ಯಕರ್ತರು ನಡೆಸುತ್ತಿರುವ(ಎಬಿವಿಪಿ ಕಾರ್ಯಕರ್ತರ ಮೇಲೆ ಮತ್ತೆ ಲಾಠಿಚಾರ್ಜ್) ಪ್ರತಿಭಟನೆ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಆರೋಪಿಸಿದ್ದಾರೆ.

ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆಮ್ನೆಸ್ಟಿ ಇಂಟರ್ ನ್ಯಾಶನಲ್ ಸಂಸ್ಥೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ತನಿಖೆ ನಡೆಯುತ್ತಿದೆ. ಆದರೂ ಎಬಿವಿಪಿ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದರು.

ಎಬಿವಿಪಿ ಭಾರತೀಯ ಜನತಾ ಪಕ್ಷದ ಒಂದು ಭಾಗವಾಗಿದೆ. ಎಬಿವಿಪಿ ಈ ವಿಚಾರದಲ್ಲಿ ಹೋರಾಟ ಮಾಡುತ್ತಿರುವುದು ಸರಿಯಲ್ಲ. ತನಿಖೆ ಮುಗಿದು ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

-ಉದಯವಾಣಿ

Comments are closed.