ಕರ್ನಾಟಕ

ತಮಿಳುನಾಡಿಗೆ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ: ಯಡಿಯೂರಪ್ಪ ಕಿಡಿ

Pinterest LinkedIn Tumblr

YADIಚಿತ್ರದುರ್ಗ, ಸೆ.7- ತಮಿಳುನಾಡಿಗೆ ಕಾವೇರಿ ನೀರನ್ನು ಹರಿಯಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದರು. ನಗರದ ಹಿಂದು ಮಹಾಗಣಪತಿ ಸಮಿತಿಯವರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗ ತಮಿಳುನಾಡಿಗೆ ನೀರು ಬಿಡಲಾಗಿತ್ತೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಆಗ ನೀರು ಬಿಟ್ಟಾಗಿನ ಪರಿಸ್ಥಿತಿ, ವಸ್ತುಸ್ಥಿತಿ ಬೇರೆಯದೇ ಇತ್ತು. ಈಗ ನಮ್ಮ ಜನತೆಗೇ ಕುಡಿಯಲು ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನ ಬೆಳೆಗೆ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಹೇಳಿದರು.

ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿ ನೀರು ಬಿಡುವ ಮೂಲಕ ಸರ್ಕಾರ ರೈತರಲ್ಲಿ ಗೊಂದಲ ಮೂಡಿಸಿದೆ ಎಂದು ತಿಳಿಸಿದರು.ಪ್ರತಿಭಟನೆ ಮಾಡುತ್ತಿರುವ ರೈತರು ಶಾಂತಿ ಕಾಪಾಡಿಕೊಳ್ಳಬೇಕು.
ಕಾನೂನಿಗೆ ತೊಡಕುಂಟುಮಾಡಬಾರದು ಎಂದು ಯಡಿಯೂರಪ್ಪ ಇದೇ ವೇಳೆ ಮನವಿ ಮಾಡಿದರು.

Comments are closed.