ಬೆಂಗಳೂರು, ಸೆ.11- ಕಳೆದ ಮೂರು ದಿನಗಳಿಂದ ಮಂಡ್ಯದಲ್ಲಿ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕಾವೇರಿ ಹಿತರಕ್ಷಣಾ ಸಮಿತಿ ಇಂದು ಐದು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ. ತಮಿಳುನಾಡಿಗೆ ಹರಿಯಬಿಡುತ್ತಿರುವ ನೀರನ್ನು ತತ್‍ಕ್ಷಣವೇ ನಿಲ್ಲಿಸಬೇಕು. ಜಲಾನಯನ ಪ್ರದೇಶದ ರೈತರುಗಳಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು. ಮೇಲುಸ್ತುವಾರಿ ಸಮಿತಿಗೆ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಮರ್ಪಕವಾಗಿ ವಾದ ಮಂಡಿಸಬೇಕು. ಕಾವೇರಿ ಕೊಳ್ಳದ ಶಾಸಕರು ಸೆ.14ರಂದು ಶಾಸಕರ ಭವನದಲ್ಲಿ ಕರೆದಿರುವ ಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು.
ರೈತರ ಮೇಲೆ ದಾಖಲಿಸಿರುವ ಎಲ್ಲ ಪ್ರಕರಣಗಳನ್ನೂ ಕೈಬಿಡಬೇಕು. ತೀರ್ಪು ಪ್ರಕಟವಾದ ಮೇಲೆ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಮತ್ತೊಮ್ಮೆ ಸಭೆ ಸೇರುವ ನಿರ್ಣಯಗಳನ್ನು ಮಂಡ್ಯದ ಪ್ರವಾಸಿ ಮಂದಿರದಲ್ಲಿ ಹೋರಾಟ ಸಮಿತಿ ಅಧ್ಯಕ್ಷ ಜಿ.ಮಾದೇಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿಂದು ಕೈಗೊಳ್ಳಲಾಯಿತು.
Comments are closed.