ಮಂಡ್ಯ: ತಮಿಳುನಾಡು ಹಾಗೂ ಕರ್ನಾಟಕ ರಾಜ್ಯ ಸರ್ಕಾರಗಳು ಸಮರ್ಪಕ ಆಡಳಿತ ನಡೆಸುವಲ್ಲಿ ವಿಫಲವಾಗಿವೆ. ಕೂಡಲೇ ಈ ಎರಡು ಸರ್ಕಾರಗಳನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಆಗ್ರಹಿಸಿದರು.
ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಮಿಳುನಾಡಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ತಮಿಳುನಾಡು ಸಿಎಂ ಜಯಲಲಿತಾ ಕಾವೇರಿ ವಿಷಯದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ರೈತರ ಹಿತವನ್ನು ಮರೆತು ತಮಿಳುನಾಡಿಗೆ ನೀರು ಹರಿಸುತ್ತಿದೆ.
ಇವೆರಡೂ ಸರ್ಕಾರಗಳು ರಾಜ್ಯದ ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿವೆ. ಕೂಡಲೇ ಸರ್ಕಾರ ವಜಾಗೊಳಿಸುವಂತೆ ಪ್ರಧಾನಿಗೆ ಟೆಲಿಗ್ರಾಮ್ ಮೂಲಕ ಒತ್ತಾಯಿಸುತ್ತೇನೆ ಎಂದರು.
ಹೋರಾಟವೊಂದೇ ಮಾರ್ಗ:
ನ್ಯಾಯಾಲಯಗಳಿಂದ ನಮಗೆ ಎಂದಿಗೂ ನ್ಯಾಯ ಸಿಗುವುದಿಲ್ಲ. ಕಾವೇರಿ ನ್ಯಾಯಾಧಿಕರಣದ ಆದೇಶ ಪಾಲಿಸುವಂತೆ ಮಾತ್ರ ಕೋರ್ಟ್‌ಗಳು ಹೇಳುತ್ತವೆ. ಈಗ ನಾವು ನ್ಯಾಯಾಧಿಕರಣದ ಆದೇಶವನ್ನು ಬದಲಿಸುವಂತೆ ಹಾಗೂ ಕೇಂದ್ರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿ ಹೋರಾಟ ನಡೆಸಬೇಕಿದೆ ಎಂದರು.
-ಉದಯವಾಣಿ
Comments are closed.